ADVERTISEMENT

ಗ್ಲೋಬಲ್ ಯೂತ್ ಸಮಿಟ್ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 4:49 IST
Last Updated 5 ಜೂನ್ 2025, 4:49 IST
ಸಮ್ಮೇಳನವನ್ನು ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಿದರು
ಸಮ್ಮೇಳನವನ್ನು ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಿದರು    

ಉಳ್ಳಾಲ: ಶಿಕ್ಷಣ ಮತ್ತು ತರಬೇತಿ ಸಮಾಜ ಪರಿವರ್ತನೆಗೆ ಶಕ್ತಿಶಾಲೀ ಉಪಕರಣಗಳು. ಯುವಕರು ಪರಿಸರ ಸಮಸ್ಯೆಗಳು, ನಾಗರಿಕ ಹಕ್ಕುಗಳು, ಮಾನವ ಹಕ್ಕುಗಳು, ತೃತೀಯಲಿಂಗ ಹಕ್ಕುಗಳು ಹಾಗೂ ಮಹಿಳಾ ಹಕ್ಕುಗಳಂತಹ ಪ್ರಮುಖ ಸಮಾಜದ ಸವಾಲುಗಳಿಗೆ ಪರಿಹಾರ ನೀಡುವಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಆಶ್ರಯದಲ್ಲಿ  ಬುಧವಾರ ಆರಂಭಗೊಂಡ ಜಾಗತಿಕ ಯುವ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ವ್ಯಕ್ತಿ ಆರೋಗ್ಯವಾಗಿರಿ, ಮಾಹಿತಿ ಹೊಂದಿರಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಿ ಎಂದರು.

ಯೆನೆಪೋಯ ವಿಶ್ವವಿದ್ಯಾಲಯದ ಕುಲಾಧಿಪತಿ ಯೆನೆಪೋಯ ಅಬ್ದುಲ್ಲ ಕುಂಞಿ ಅಧ್ಯಕ್ಷತೆ ವಹಿಸಿದ್ದರು. ಯೆನೆಪೋಯ ವಿಶ್ವವಿದ್ಯಾಲಯ ಕುಲಪತಿ ವಿಜಯಕುಮಾರ್, ಮುಖಂಡ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ, ರಾಜ್ಯ ಎನ್‌ಎಎಸ್‌ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಯೆನೆಪೋಯ ಸಹ-ಉಪಕುಲಪತಿ ಶ್ರೀಪತಿ ರಾವ್, ಕುಲಸಚಿವ ಕೆ.ಎಸ್. ಗಂಗಾಧರ ಸೋಮಯಾಜಿ, ರಾಜ್ಯ ಎನ್‌ಎಎಸ್‌ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಉಪಾಧ್ಯಾಯ ಭಾಗವಹಿಸಿದ್ದರು. ಚೇತನ್ ಸ್ವಾಗತಿಸಿದರು. ಅಶ್ವಿನಿ ಶೆಟ್ಟಿ ವಂದಿಸಿದರು. ಬಬಿತಾ ಕಾರ್ಯಕ್ರಮ ನಿರೂಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.