ADVERTISEMENT

ಪುತ್ತೂರು | ಮನೆಯಿಂದ ಚಿನ್ನಾಭರಣ-ನಗದು ಕಳವು

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 5:36 IST
Last Updated 15 ಆಗಸ್ಟ್ 2025, 5:36 IST
ಕಳ್ಳತನ (ಪ್ರಾತಿನಿಧಿಕ ಚಿತ್ರ)
ಕಳ್ಳತನ (ಪ್ರಾತಿನಿಧಿಕ ಚಿತ್ರ)   

ಪುತ್ತೂರು: ಒಬ್ಬಂಟಿಯಾಗಿ ವಾಸ್ತವ್ಯವಿದ್ದ ಮಹಿಳೆಯೊಬ್ಬರ ಮನೆಯೊಂದರಿಂದ ಕಳ್ಳರು ₹ 1ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ನಡೆದಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ಕೃಷ್ಣರಾಯ ನಿಲಯದ ಶೋಭಾ ಅವರ ಮನೆಯಲ್ಲಿ ಕಳವು ನಡೆದಿದ್ದು, ಈ ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಮನೆಯ ಹಿಂಬಾಗಿಲನ್ನು ತೆರೆದು ಒಳನುಗ್ಗಿರುವ ಕಳ್ಳರು, ಮನೆಯೊಳಗಿದ್ದ ಕಪಾಟಿನ ಬೀಗ ಮುರಿದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 24 ಗ್ರಾಂನ ಲಕ್ಷ್ಮೀ ಸರ (ಚೈನ್), 3ಗ್ರಾಂನ ಒಂದು ಜತೆ ಪಟ್ಟೆಕಲ್ಲಿನ ಕಿವಿಯೋಲೆ, 4 ಗ್ರಾಂನ ಒಂದು ಜತೆ ಜುಮುಕಿ, ಸುಮಾರು ₹ 5 ಸಾವಿರ ಹಣ ಕಳವು ಮಾಡಿದ್ದಾರೆ. ಕಳವಾದ ಚಿನ್ನಾಭರಣದ ಮೌಲ್ಯ ₹ 1.20 ಲಕ್ಷ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.