ಸಾಂದರ್ಭಿಕ ಚಿತ್ರ
ಮಂಗಳೂರು: ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದನಾಳದಲ್ಲಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ವಶಪಡಿಸಿಕೊಂಡಿದ್ದಾರೆ.
ದಮಾಮ್‌ನಿಂದ ಗುರುವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರೊಬ್ಬರನ್ನು ಮೆಟಲ್ ಡಿಟೆಕ್ಟರ್ ತಪಾಸಣೆ ನಡೆಸುವಾಗ ಬೀಫ್ ಸದ್ದು ಬಂದಿದ್ದು, ತಪಾಸಣೆ ನಡೆಸಿದಾಗ, ಅವರು ಗುದನಾಳದಲ್ಲಿ ₹58.78 ಲಕ್ಷ ಮೌಲ್ಯದ 812 ಗ್ರಾಂ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದು ಪತ್ತೆಯಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.