ADVERTISEMENT

ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ರಾಜ್ಯಪಾಲ ಥಾವರಚಂದ್ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2022, 10:06 IST
Last Updated 14 ಮಾರ್ಚ್ 2022, 10:06 IST
ರಾಜ್ಯಪಾಲ ಥಾವರಚಂದ್ ಗೆಹಲೋತ್ ಸೋಮವಾರ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಸೋಮವಾರ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.   

ಮಂಗಳೂರು: ರಾಜ್ಯಪಾಲ ಥಾವರಚಂದ್ ಗೆಹಲೋತ್ ಸೋಮವಾರ ನಗರದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಅವರನ್ನು ಸೋಮವಾರ ಬೆಳಿಗ್ಗೆ ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ನಂತರ ಅವರು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ಉಪವಿಭಾಗಾಗಾಧಿಕಾರಿ ಮದನ್ ಮೋಹನ್, ಡಿಸಿಪಿ ಹರಿರಾಂ ಶಂಕರ್, ದೇವಸ್ಥಾನದ ಅಧ್ಯಕ್ಷ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.