ADVERTISEMENT

ನಡ: ಕಾಲೇಜು ವಿದ್ಯಾರ್ಥಿ ಸಂಘ, ರೇಂಜರ್ಸ್ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 13:04 IST
Last Updated 7 ಆಗಸ್ಟ್ 2022, 13:04 IST
   

ನಡ (ಬೆಳ್ತಂಗಡಿ): ‘ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಧ್ಯೇಯವನ್ನು ಹೊಂದಿರಬೇಕು. ಉತ್ತಮ ಚಾರಿತ್ರ್ಯವನ್ನು ಬೆಳೆಸಿಕೊಂಡು ದೇಶ ನಿರ್ಮಾಣದ ಸಂಕಲ್ಪ ತೊಡುವ ಪರಿಪಕ್ವ ನಾಯಕತ್ವ ಬೆಳೆಸಿಕೊಳ್ಳಬೇಕು’ ಎಂದು ವಾಮದಪದವು ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ರವಿ ಎಂ.ಎನ್. ಅಭಿಪ್ರಾಯಪಟ್ಟರು.

ಅವರು ಇತ್ತೀಚೆಗೆ ಬೆಳ್ತಂಗಡಿ ತಾಲ್ಲೂಕಿನ ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಧ್ಯಾಪಕ ರವಿ ಎಂ. ಎನ್. ‘ಕಲ್ಪನಾ ಚಾವ್ಲ’ ರೇಂಜರ್ಸ್ ಘಟಕದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ADVERTISEMENT

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಜಿತ್ ಆರಿಗ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಳೆದ ದ್ವೀತಿಯ ಪಿ.ಯು.ಸಿ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ಮತ್ತು ವಾಣಿಜ್ಯ ಶಾಸ್ತ್ರ ವಿಷಯಗಳಲ್ಲಿ ಉನ್ನತ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಉಪನ್ಯಾಸಕರ ವತಿಯಿಂದ ಪ್ರೋತ್ಸಾಹ ಧನ ವಿತರಿಸಲಾಯಿತು. ವಾರ್ಷಿಕ ಪರೀಕ್ಷೆ ಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಕ್ಷೇಮಾಭಿವೃದ್ಧಿ ನಿಧಿ ಯಿಂದ ಪುಸ್ತಕ ರೂಪದ ಬಹುಮಾನಗಳನ್ನು ನೀಡುವ ಕಾರ್ಯಕ್ರಮವನ್ನು ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಕೇತ ನಿರ್ವಹಿಸಿದರು. ವಿದ್ಯಾರ್ಥಿಸಂಯೋಜಕಿ ಶ್ರೀಮತಿ ಶಿಲ್ಪಾ ಪ್ರಸ್ತಾವನೆಗೈದರು. ರೇಂಜರ್ಸ್ ಘಟಕದ ಸಂಯೋಜಕಿ ಶ್ರೀಮತಿ ವಸಂತಿ ಸ್ವಾಗತಿಸಿ, ವಿದ್ಯಾರ್ಥಿಸಂಘದ ಸಹ ಸಂಯೋಜಕ ಶ್ರೀ ಗಂಗಾಧರಪ್ಪ ವಂದನಾರ್ಪಣೆಗೈದರು. ಆಂಗ್ಲ ಭಾಷಾ ಉಪನ್ಯಾಸಕ ಶ್ರೀ ಮೋಹನ ಗೌಡ ಕಾರ್ಯಕ್ರಮ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.