ADVERTISEMENT

ಗ್ರಾಮ ಅಭಿವೃದ್ಧಿಗೆ ಹಲವಾರು ಯೋಜನೆ

ಗ್ರಾ. ಪಂ. ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಡಾ. ಕುಮಾರ್

​ಪ್ರಜಾವಾಣಿ ವಾರ್ತೆ
Published 19 ಮೇ 2022, 2:31 IST
Last Updated 19 ಮೇ 2022, 2:31 IST
ಡಾ. ಕುಮಾರ್
ಡಾ. ಕುಮಾರ್   

ಮಂಗಳೂರು: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಗ್ರಾಮಗಳ ಏಳಿಗೆಗೆ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಕುರಿತು ಮಂಗಳೂರು ಮತ್ತು ಮೂಡುಬಿದಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಗರದ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಬುಧವಾರಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಮಾಡುವುದು ಭಾಗ್ಯ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು. ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಆ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಇರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಗ್ರಾಮದಲ್ಲಿ ಎಲ್ಲ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ಇರಬೇಕು. ಇಲ್ಲದಿದ್ದರೆ ಅಂತಹ ಮನೆಗಳಿಗೆ ಖುದ್ದು ಅಧ್ಯಕ್ಷರೇ ಭೇಟಿ ನೀಡಿ ಅವರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಯತ್ನಿಸಬೇಕು. ಗ್ರಾಮಗಳಲ್ಲಿರುವ ವಸತಿ ರಹಿತರಿಗೆ ನಿವೇಶನ ಒದಗಿಸುವ ವಿವಿಧ ಯೋಜನೆಯಡಿ ಅರ್ಹರಿಗೆ ನಿವೇಶನ ಒದಗಿಸಿ ಕೊಡಬೇಕು ಎಂದು ಅವರು ತಿಳಿಸಿದರು.

ADVERTISEMENT

ಈಗಾಗಲೇ ಜಿಲ್ಲಾ ಪಂಚಾಯಿತಿಯಲ್ಲಿ ‘ಪುಸ್ತಕದ ಗೂಡು’ ನಿರ್ಮಿಸಿದ್ದು, ಅದು 267 ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಕಡೆಗಳಲ್ಲಿ ಅನುಷ್ಠಾನಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಮಂಗಳೂರು ಮತ್ತು ಮೂಡುಬಿದಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.