ADVERTISEMENT

ಮಂಗಳೂರು | ಪ್ರವಾಸೋದ್ಯಮ ಅಭಿವೃದ್ಧಿಗೆ ₹50 ಕೋಟಿ: ಸಚಿವ ಸುರೇಶ್

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2023, 6:20 IST
Last Updated 25 ನವೆಂಬರ್ 2023, 6:20 IST
<div class="paragraphs"><p>ಸಚಿವ ಸುರೇಶ್ ಬಿ.ಎಸ್</p></div>

ಸಚಿವ ಸುರೇಶ್ ಬಿ.ಎಸ್

   

ಮಂಗಳೂರು: 19ನೇ ರಾಷ್ಟ್ರೀಯ ಹಿರಿಯರ ಈಜು ಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಿಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿದೆ.

ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ‘ಮಂಗಳೂರು ನಗರವನ್ನು ಪ್ರವಾಸಿ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ ಸಂಸದರು, ಶಾಸಕರು, ಮಹಾನಗರ ಪಾಲಿಕೆ ಸದಸ್ಯರು ಸೇರಿ ಯೋಜನೆ ರೂಪಿಸಿ, ಸರ್ಕಾರಕ್ಕೆ ಸಲ್ಲಿಸಿದರೆ, ನಗರಾಭಿವೃದ್ಧಿ ಇಲಾಖೆಯಿಂದ ₹50 ಕೋಟಿ ಅನುದಾನ ಒದಗಿಸಲಾಗುವುದು. ಮಂಗಳೂರು ನಗರದ ಅಭಿವೃದ್ಧಿಗೆ ಸಂಬಂಧಿಸಿ ಪಾಲಿಕೆಗೆ ಶೀಘ್ರದಲ್ಲಿ ₹25 ಕೋಟಿ ಬಿಡುಗಡೆ ಮಾಡಲಾಗುವುದು’ ಎಂದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಉಪಮೇಯರ್ ಸುನೀತಾ, ಪಾಲಿಕೆಯಲ್ಲಿ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಅಬ್ದುಲ್ ಲತೀಫ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ., ಪಾಲಿಕೆ ಆಯುಕ್ತ ಆನಂದ ಸಿ.ಎಲ್., 19ನೇ ರಾಷ್ಟ್ರೀಯ ಹಿರಿಯರ ಈಜು ಸ್ಪರ್ಧೆಯ ಕಾರ್ಯನಿರ್ವಾಹಕ ಅಧ್ಯಕ್ಷ ತೇಜೋಮಯ ಇದ್ದರು.

ಈಜುಪಟು ಎಂ.ಆರ್. ಮೋಹಿತೆ, ಗುತ್ತಿಗೆದಾರ ಉದ್ರಾ ಕನ್‌ಸ್ಟ್ರಕ್ಷನ್ಸ್‌ನ ಅಧ್ಯಕ್ಷ ಸಿಬಾ ಪ್ರಸಾದ್, ಯೋಜನಾ ನಿರ್ದೇಶಕ ಪುನೀತ್ ಟಿ.ಪಿ ಅವರನ್ನು ಸನ್ಮಾನಿಸಲಾಯಿತು. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು ಕೆ ಸ್ವಾಗತಿಸಿದರು. ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರಿನ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಈಜುಕೊಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಸ್ಪೀಕರ್ ಯು.ಟಿ. ಖಾದರ್ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಇತರ ಅತಿಥಿಗಳ ಸಮ್ಮುಖದಲ್ಲಿ ಈಜುಪಟುಗಳು ಪ್ರತಿಭೆ ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ / ಫಕ್ರುದ್ದೀನ್ ಎಚ್
ಹಿರಿಯರ ಈಜು ಸ್ಪರ್ಧೆ
ನೂತನವಾಗಿ ನಿರ್ಮಾಣವಾಗಿರುವ ಎಮ್ಮೆಕೆರೆ ಈಜುಕೊಳದಲ್ಲಿ ಹಿರಿಯರ 19ನೇ ರಾಷ್ಟ್ರೀಯ ಈಜು ಸ್ಪರ್ಧೆ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ವಿವಿಧ ರಾಜ್ಯಗಳ ಈಜುಪಟುಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.