ಬಂಟ್ವಾಳ: ಇಲ್ಲಿನ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಜಗದಾಂಬಿಕ ಭಜನಾ ಮಂದಿರ ಬಳಿಯಿಂದ ಮೆರವಣಿಗೆ ನಡೆಯಿತು.
ಅಕ್ಷರ ದಾಸೋಹಕ್ಕಾಗಿ ಮಕ್ಕಳ ಪೋಷಕರು ಶಾಲೆಗೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಿದರು.
ಶ್ರೀದುರ್ಗಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ, ಮುಂದಿನ ದಿನಗಳಲ್ಲಿ ಪಿಯು ಆರಂಭಿಸಲು ಚಿಂತನೆ ನಡೆದಿದೆ ಎಂದರು.
ಸಹಶಿಕ್ಷಕಿ ಹಿಲ್ಡಾ ಫರ್ನಾಂಡಿಸ್, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಅಂಚನ್ ಮಾಹಿತಿ ನೀಡಿದರು.
ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಟ್ರಸ್ಟಿ ರಾಮಚಂದ್ರ ಪೂಜಾರಿ ಕರೆಂಕಿ, ಶಿಕ್ಷಕರಾದ ಅನಿತಾ, ಕವಿತಾ ಭಾಗವಹಿಸಿದ್ದರು.
ಪ್ರೌಢಶಾಲೆ ಮುಖ್ಯ ಶಿಕ್ಷಕ ರಮಾನಂದ ಸ್ವಾಗತಿಸಿ, ಮುಖ್ಯ ಶಿಕ್ಷಕಿ ವಿನ್ನಿ ಸಿಂಥಿಯಾ ವಂದಿಸಿದರು. ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿದ್ದು, ಅದಕ್ಕೆ ಅನುಗುಣವಾಗಿ ಸರ್ಕಾರ ಶಿಕ್ಷಕರನ್ನು ನೀಡಿಲ್ಲ. ಜೂನ್ 5ರ ಒಳಗೆ 23 ಮಂದಿ ಶಿಕ್ಷಕರು, ಒಬ್ಬರು ದೈಹಿಕ ಶಿಕ್ಷಣ ಶಿಕ್ಷಕರು, ಒಬ್ಬರು ಮುಖ್ಯ ಶಿಕ್ಷಕರನ್ನು ಒದಗಿಸ ಬೇಕು ಎಂದು ಆಗ್ರಹಿಸಿ ಟ್ರಸ್ಟ್ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.