
ಮಂಗಳೂರು: ‘ಗೃಹಲಕ್ಷ್ಮೀ ಮತ್ತಿತರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ 1,44, 056 ಮಂದಿ ಮೃತಪಟ್ಟ ಬಳಿಕವೂ ಅವರ ಖಾತೆಗೆ ಸುಮಾರು ₹ 68 ಲಕ್ಷ ಜಮೆ ಆಗಿದೆ’ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಇಲ್ಲಿ ತಿಳಿಸಿದರು.
ದಕ್ಷಿಣಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಕಾರ್ಯಾಗಾರ, ಪ್ರಗತಿ ಪರಿಶೀಲನಾ ಸಭೆ ಹಾಗೂ ಮಾದಕನಶೆಮುಕ್ತ ಕರ್ನಾಟಕ ಅಭಿಯಾನವನ್ನು ಇಲ್ಲಿ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ನೇರ ನಗದು ಪಾವತಿ ವ್ಯವಸ್ಥೆ ಇರುವುದರಿಂದ ಫಲಾನುಭವಿಗಳು ಮೃತಪಟ್ಟ ಬಳಿಕವೂ ಅವರ ಖಾತೆಗೆ ಹಣ ಜಮೆ ಆಗಿದೆ. ಆ ಹಣ ಜನರದ್ದು. ಹಾಗಾಗಿ ಅದನ್ನು ಹಿಂಪಡೆಯಲು ಪ್ರಯತ್ನ ನಡೆದಿದೆ’ ಎಂದರು.
‘ಕಟ್ಟಕಡೆಯ ಫಲಾನುಭವಿಗೂ ಯೋಜನೆಗಳ ಲಾಭ ಸಿಗುವಂತೆ ಮಾಡುವುದು ಗ್ಯಾರಂಟಿ ಅನುಷ್ಠಾನ ಸಮಿತಿಗಳ ಹೊಣೆ. ಯೋಜನೆಯ ಫಲ ಪೋಲು ತಪ್ಪಿಸಬೇಕಾದ ಹೊಣೆಯೂ ಸಮಿತಿಗಳ ಮೇಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.