ಬೆಳ್ತಂಗಡಿ: ವಕೀಲ, ಜಿಎಸ್‌ಬಿ ಸಮುದಾಯದ ಮುಖಂಡ ಕೆ.ಪ್ರಕಾಶ್ ಶೆಣೈ ಅವರು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ಅವರೂ ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ವಕ್ತಾರ ಎ.ಸಿ.ವಿನಯರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಬ್ಲಾಕ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ನಮಿತಾ ಕೆ.ಪೂಜಾರಿ, ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.