ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಶನಿವಾರ ಎಡಪದವು ವೆಂಕಟೇಶ ತಂತ್ರಿ ಅವರ ನೇತೃತ್ವದಲ್ಲಿ ಹನುಮ ಜಯಂತಿ ಆಚರಿಸಲಾಯಿತು.
ಬೆಳಿಗ್ಗೆ ಸ್ವಸ್ತಿ ವಾಚನ, ಗಣಪತಿ ಹೋಮ, ಕಲಶಾಭಿಷೇಕ, ಪವಮಾನ ಹೋಮ, ದುರ್ಗಾಹೋಮ ನಡೆಯಿತು. ನಂತರ ಹೆಗ್ಗಡೆ ಮಹಿಳಾ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು. ವಿಶೇಷ ಸಿಯಾಳಾಭಿಷೇಕದ ನಂತರ ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ಅವರು ಮಹಾಪೂಜೆ ನೆರವೇರಿಸಿದರು.
ಮಧ್ಯಾಹ್ನ 2 ಗಂಟೆಗೆ ಹೆಗ್ಗಡೆ ಸಮಾಜದ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀರಾಮ ದರ್ಶನ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಸಂಜೆ ರಂಗಪೂಜೆ ಸೇವೆ ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಉದಯ ಕುಮಾರ್ ಹೆಗ್ಡೆ, ಕಾರ್ಯದರ್ಶಿ ಶಂಕರ್ ಹೆಗ್ಡೆ, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ, ಕಾರ್ಯದರ್ಶಿ ವೈಷ್ಣವ್ ಹೆಗ್ಡೆ, ದೇವಸ್ಥಾನದ ಮೊಕ್ತೇಸರರು, ಹೆಗ್ಗಡೆ ಸಂಘದ ಪದಾಧಿಕಾರಿಗಳು, ಮಹಿಳಾ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.