
ಪ್ರಜಾವಾಣಿ ವಾರ್ತೆ
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹರೀಶ್ ತೋಳಾರ್ ಕೊಲ್ಲೂರು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜಿಲ್ಲಾ ಸಮಿತಿ ಅಧ್ಯಕ್ಷ ತಿಮ್ಮ ಪೂಜಾರಿ ಮಣೂರು ಆದೇಶಿಸಿದ್ದಾರೆ.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಉಸ್ತುವಾರಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.