ADVERTISEMENT

ಸೌಹಾರ್ದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 3:37 IST
Last Updated 15 ಆಗಸ್ಟ್ 2021, 3:37 IST

ಮಂಗಳೂರು: ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ನೆರವು ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ ‘ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ’ವು ಅಕ್ಟೋಬರ್ 16ರಂದು ತಾಲ್ಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ‘ಝರಾ ಆಡಿಟೋರಿಯಂ’ನಲ್ಲಿ ನಡೆಯಲಿದೆ.

ಜಾತಿ, ಮತ, ಧರ್ಮಗಳ ಭೇದವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡಬಿದಿರೆ ತಾಲ್ಲೂಕಿನಲ್ಲಿ ವಾಸವಿರುವ ವಧುವಿನ ಕುಟುಂಬದವರು ಅರ್ಜಿ ಸಲ್ಲಿಸಲು ಅರ್ಹರು. ಆಯ್ದ ವಧುವಿಗೆ ಮದುವೆಯ ವಸ್ತ್ರ, 4 ಪವನ್ ಚಿನ್ನಾಭರಣ ನೀಡುವುದರ ಜತೆಗೆ ಮದುವೆಯ ಖರ್ಚನ್ನು ಸಹ ಬಜ್ಪೆ ಝಕರಿಯಾ ಫೌಂಡೇಶನ್ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕ ಹಿಂದುಳಿದ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆದ್ಯತೆ ನೀಡಲಾಗುವುದು. ಆಯ್ದ ಜೋಡಿಗಳ ಮದುವೆಯನ್ನು ಅವರವರ ಧಾರ್ಮಿಕ ಸಂಪ್ರದಾಯದಂತೆ ನೆರವೇರಿಸುವ ವ್ಯವಸ್ಥೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಉಮರ್ ಯು.ಎಚ್, ಸಂಚಾಲಕರು, ಸಾಮೂಹಿಕ ವಿವಾಹ ಸಂಘಟನಾ ಸಮಿತಿ, ಬಜ್ಪೆ ಝಕರಿಯಾ ಫೌಂಡೇಶನ್, ಸಿ 24, 2ನೇ ಮಹಡಿ, ಅಲ್ ರಹಬಾ ಪ್ಲಾಝಾ, ಸ್ಟೇಟ್ ಬ್ಯಾಂಕ್ ಬಳಿ, ನೆಲ್ಲಿಕಾಯಿ ರಸ್ತೆ, ಮಂಗಳೂರು–575001 (9845054191) ಅಥವಾ ಎ.ಎಚ್. ನೌಶಾದ್ ಹಾಜಿ ಸೂರಲ್ಪಾಡಿ (9945613699) ಅವರನ್ನು ಸಂಪರ್ಕಿಸಬಹುದು ಎಂದು ಝಕರಿಯಾ ಫೌಂಡೇಶನ್ ಸ್ಥಾಪಕಾಧ್ಯಕ್ಷ ಬಿ.ಝಕರಿಯಾ ಜೋಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.