ಬೆಳ್ತಂಗಡಿ: ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಂಗಳೂರು– ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು.
ತಾಲ್ಲೂಕಿನಲ್ಲಿ ಸುಮಾರು ಒಂದು ಗಂಟೆ ಧಾರಾಕಾರ ಮಳೆ ಆಗಿದೆ. ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ರಸ್ತೆ ಅಗೆದಿರುವ, ಮಣ್ಣು ತುಂಬಿರುವ ಕಡೆ ಮಳೆ ನೀರು ಸಂಗ್ರಹವಾಗಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಕಾಮಗಾರಿ ಕಾರಣ ಚರಂಡಿ ಮುಚ್ಚಿದ್ದು, ಮಳೆ ನೀರು ರಸ್ತೆಯ ಮೇಲೆ ಹರಿಯಿತು. ರಸ್ತೆಯಿಂದ ಕೆಳಗಿಳಿದ ಕೆಲವು ವಾಹನಗಳು ಕೆಸರಿನಲ್ಲಿ ಹೂತು ಹೋದವು.
ಜನವರಿ ಮೊದಲ ವಾರದಿಂದ ರೈತರು ತೋಟಗಳಿಗೆ ನೀರು ಹಾಯಿಸಲು ಆರಂಭಿಸಿದ್ದರು. ಕಿಂಡಿ ಅಣೆಕಟ್ಟೆಗಳಿಗೆ ಹಲಗೆ ಇಳಿಸಿ ನೀರು ಸಂಗ್ರಹಕ್ಕೆ ಮುಂದಾಗಿದ್ದರು. ಮಳೆಯಿಂದಾಗ ಆ ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ. ನದಿ, ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಒಣಗಲು ಹಾಕಿದ್ದ ಅಡಿಕೆ ಸಂಪೂರ್ಣ ಒದ್ದೆಯಾಗಿದ್ದು, ಎರಡನೇ ಕೊಯ್ಲಿಗೆ ಮಳೆ ಅಡ್ಡಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.