ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಉತ್ತಮ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 2ರ ವರೆಗೆ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು, ಪುತ್ತೂರು, ಮೂಲ್ಕಿ, ಮೂಡುಬಿದಿರೆ, ಉಳ್ಳಾಲ, ಬಂಟ್ವಾಳ ತಾಲ್ಲೂಕು ಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಗುರುವಾರ (ಆ. 28) ರಜೆ ಘೋಷಿಸಲಾಗಿದೆ.
ಬುಧವಾರ ಬಿಟ್ಟು ಬಿಟ್ಟು ಸುರಿದ ಮಳೆ ಗುರುವಾರದ ಬೆಳಿಗ್ಗೆಯ ಹೊತ್ತಿಗೆ ತೀವ್ರತೆ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.