ಮಂಗಳೂರು: ಮಂಗಳವಾರ ಸಂಜೆಯಿಂದ ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಮಂಗಳೂರು ನಗರದ ಆಕಾಶಭವನದಲ್ಲಿ ಲಘು ಭೂಕುಸಿತ ಸಂಭವಿಸಿ ಮನೆಗೆ ಹಾನಿಯಾಗಿದೆ.
ಪುತ್ತೂರು ತಾಲ್ಲೂಕಿನ ನರಿಮೊಗರು ಸರ್ಕಾರಿ ಶಾಲೆಯ ಶೌಚಾಲಯದ ಮೇಲೆ ಮರ ಉರುಳಿ ವಿದ್ಯಾರ್ಥಿಗೆ ಗಾಯವಾಗಿದೆ.
ಆಕಾಶಭವನದಲ್ಲಿ ಬುಧವಾರ ಬೆಳಿಗ್ಗೆ ಗುಡ್ಡ ಕುಸಿದು ಮನೆಯೊಂದರ ಮೇಲೆ ಬಿದ್ದಿದೆ. ಮಹಾನಗರ ಪಾಲಿಕೆ ವತಿಯಿಂದ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.
ಪುತ್ತೂರು ತಾಲ್ಲೂಕಿನ ನರಿಮೊಗರು ಸರ್ಕಾರಿ ಶಾಲೆಯ ಶೌಚಾಲಯದ ಮೇಲೆ ಮರವೊಂದು ಉರುಳಿಬಿದ್ದು, ಶೌಚಾಲಯದ ಕಟ್ಟಡಕ್ಕೆ ಹಾನಿಯಾಗಿದೆ. ಮರ ಬೀಳುವಾಗ ವಿದ್ಯಾರ್ಥಿಗಳು ಶೌಚಾಲಯದ ಬಳಿಯಲ್ಲೇ ಇದ್ದರು. ಒಬ್ಬ ವಿದ್ಯಾರ್ಥಿಗೆ ಗಾಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.