ADVERTISEMENT

ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ಕುಮಾರಧಾರ ಸ್ನಾನಘಟ್ಟ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 13:43 IST
Last Updated 15 ಜುಲೈ 2024, 13:43 IST
ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿರುವುದು
ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿರುವುದು   

ಸುಬ್ರಹ್ಮಣ್ಯ: ಘಟ್ಟ ಪ್ರದೇಶ ಹಾಗೂ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಯಾಗಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಸೋಮವಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಭಾನುವಾರ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ. ನೀರಿನ ಮಟ್ಟ ಹೆಚ್ಚಿರುವುದರಿಂದ ನದಿ ನೀರಿಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ. ನದಿ ನೀರನ್ನು ಡ್ರಮ್‌ಗಳಲ್ಲಿ ತುಂಬಿಸಿ ನದಿ ದಡದಲ್ಲಿ ಇರಿಸಿ ಭಕ್ತರಿಗೆ ತೀರ್ಥ ಸ್ನಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕುಮಾರಧಾರ ಸ್ನಾನಘಟ್ಟ ಪ್ರದೇಶದಲ್ಲಿ ಗೃಹರಕ್ಷಕ ಸಿಬ್ಬಂದಿ ಹಾಗೂ ದೇವಸ್ಥಾನದ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸೋಮವಾರವೂ ಸುಬ್ರಹ್ಮಣ್ಯ ಪರಿಸರದಲ್ಲಿ ಧಾರಾಕಾರ ಮಳೆಯಾಗಿದ್ದು, ದರ್ಪಣ ತೀರ್ಥ ನದಿ, ಹೊಳೆ, ತೋಡುಗಳು ತುಂಬಿ ಹರಿಯುತ್ತಿವೆ. ಸುಬ್ರಹ್ಮಣ್ಯ ಪೇಟೆ, ಬಳ್ಪ, ಯೇನೆಕಲ್ಲು, ಬಿಳಿನೆಲೆ, ಕೈಕಂಬ, ಕುಲ್ಕುಂದ, ಐನೆಕಿದು ಪರಿಸರದಲ್ಲೂ ನಿರಂತರ ಮಳೆಯಾಗಿದೆ.

ADVERTISEMENT
ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ ಮುಳುಡೆಯಾಗಿರುವುದು        

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.