ADVERTISEMENT

ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 15:27 IST
Last Updated 23 ಮಾರ್ಚ್ 2022, 15:27 IST
ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಸಂಜೆ ಮಳೆಯಾಯಿತು.
ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಸಂಜೆ ಮಳೆಯಾಯಿತು.   

ಸುಬ್ರಹ್ಮಣ್ಯ: ಸುಳ್ಯ, ಕಡಬ ತಾಲ್ಲೂಕಿನ ಹಲವೆಡೆ ಬುಧವಾರ ಸಂಜೆ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ, ಐನೆಕಿದು, ಬಳ್ಪ, ಬಿಳಿನೆಲೆ, ಕಡ್ಯ ಕೊಣಾಜೆ, ಇಚ್ಲಂಪಾಡಿ, ನೂಜಿಬಾಳ್ತಿಲ, ರೆಂಜಿಲಾಡಿ, ಕಲ್ಲುಗುಡ್ಡೆ, ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ಕಲ್ಲಾಜೆ, ಪಂಜ ಸೇರಿದಂತೆ ಹಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಗಾಳಿಗೆ ಕೆಲವೆಡೆ ಮರದ ಗೆಲ್ಲು ಮುರಿದು ಬಿದ್ದಿದ್ದು, ಕೆಲವೆಡೆ ಚಾವಣಿಗಳು ಹಾರಿ ಹೋಗಿ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT