ಪ್ರಾತಿನಿಧಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಪ್ರಾರಂಭವಾದ ಮಳೆಯ ಅಬ್ಬರ ಸೋಮವಾರ ಮಧ್ಯಾಹ್ನದವರೆಗೂ ಮುಂದುವರಿಯಿತು.
ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ಮಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನದವರೆಗೆ ಎಡೆಬಿಡದೆ ಸುರಿದ ಮಳೆ, ಮಧ್ಯಾಹ್ನದ ನಂತರ ಕೊಂಚ ತಗ್ಗಿತು.
ಅರಬ್ಬಿ ಸಮುದ್ರದಲ್ಲಿ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ನಾಡದೋಣಿ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.