ADVERTISEMENT

ಮಂಗಳೂರು: ಭಾರೀ ವಾಹನಗಳ ಸಂಚಾರ ನಿಷೇಧ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 5:28 IST
Last Updated 12 ಜೂನ್ 2020, 5:28 IST

ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಡ್ಡುವ ನಿಟ್ಟಿನಲ್ಲಿ ಹಾಗೂ ರಸ್ತೆಯ ಸುರಕ್ಷತೆಗಾಗಿ ಇದೇ 11 ರಿಂದ ಆಗಸ್ಟ್‌ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ, ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ಆರಂಭಿಸಿ, 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಣೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಣೆ ವಾಹನ, ಬುಲೆಟ್ ಟ್ಯಾಂಕರ್‌, ಶಿಪ್, ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್, ಮಲ್ಟಿ ಎಕ್ಸಲ್ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT