ರಸ್ತೆಗೆ ಉರುಳಿದ ತೆಂಗಿನ ಮರ
ಉಜಿರೆ: ಚಾರ್ಮಾಡಿ, ಮುಂಡಾಜೆ, ಉಜಿರೆ, ನಿಡ್ಲೆ ಹಾಗೂ ಧರ್ಮಸ್ಥಳದಲ್ಲಿ ಮಂಗಳವಾರ ಭಾರಿ ಗಾಳಿ ಸಹಿತ ಜಡಿಮಳೆಯಾಗಿದೆ.
ಕಕ್ಕಿಂಜೆಯಲ್ಲಿ ಸರ್ಕಾರಿ ಆಸ್ಪತ್ರೆಯ ಹಿಂಬದಿ ಗೋಡೆ ಕುಸಿದಿದೆ. ಎರಡು ಅಂಗಡಿಗಳಿಗೆ ಹಾನಿಯಾಗಿದೆ. ಮನೆಯೊಂದರ ಮೇಲೆ ಮರ ಉರುಳಿದೆ.
ಧರ್ಮಸ್ಥಳ ಗ್ರಾಮದ ದೊಂಡೋಲೆ - ನಾರ್ಯ ರಸ್ತೆಗೆ ಮರಗಳು ಉರುಳಿ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಗಾಳಿಯ ರಭಸಕ್ಕೆ ಮನೆಯೊಂದರ ಶೀಟ್ ಹಾರಿ ಹೋಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.