ADVERTISEMENT

ಅಂಗಡಿಯಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಿಂದ ಬೆಂಕಿ: ಸುಟ್ಟು ಭಸ್ಮವಾದ ವಸ್ತುಗಳು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 2:23 IST
Last Updated 15 ಫೆಬ್ರುವರಿ 2026, 2:23 IST
ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಜ್ವಾಲೆ
ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಜ್ವಾಲೆ   

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಭಾಗಶಃ ಸುಟ್ಟು ಹೋದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್‌ನ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬುವರ ಕೆಎಎಫ್ ಕ್ರಿಯೇಟಿವ್ ಆರ್ಟ್ ಆ್ಯಂಡ್‌ ಕ್ರಾಫ್ಟ್ ಸ್ಟೋರ್‌ನಲ್ಲಿ ಕೆಲಸದವರು ಶನಿವಾರ ಬೆಳಿಗ್ಗೆ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವಾಗ ಅವಘಡ ನಡೆದಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದರು. ಬೆಂಕಿ ಜ್ವಾಲೆಯಿಂದ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. 

ADVERTISEMENT

ಘಟನೆಯನ್ನು ನೋಡಲು ಹಲವರು ಸೇರಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಬೆಳ್ತಂಗಡಿ ಪೊಲೀಸರು ಜನರನ್ನು ತೆರವು ಮಾಡಿದರು. ಬೆಂಕಿ ಉರಿಯುವುದನ್ನು ನೋಡಿದ ಮಳಿಗೆಯ ಕಾರ್ಮಿಕರೊಬ್ಬರು ಮೂರ್ಛೆ ಹೋದರು. ಅವರನ್ನು ಬಳಿಕ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.