
ಪುತ್ತೂರು: ರಾಜ್ಯ ಸರ್ಕಾರದ ತಂತ್ರಾಂಶದಲ್ಲಿ ತಾಲ್ಲೂಕಿನ ಮುಖಾರಿ ಸಮುದಾಯದ ಜಾತಿ ದಾಖಲಾಗದಿರುವುದರ ಕುರಿತು ಗುರುವಾರ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮುಖಾರಿ ಸಮುದಾಯದ ಉದಯಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಸುನೀಲ್‌ದತ್ ಯಾದವ್ ಅವರು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ಆದೇಶಿಸಿದ್ದಾರೆ.
ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮುಖಾರಿ ಸಮುದಾಯದ 20 ಶಾಲಾ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ಕೋರಿ ತಹಶೀಲ್ದಾರ್‌ಗೆ ಅರ್ಜಿ ಸಲ್ಲಿಸಿದ್ದು, ಮುಖಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣಪತ್ರ ನೀಡಲು ರಾಜ್ಯ ಸರ್ಕಾರದ ತಂತ್ರಾಂಶದಲ್ಲಿ ಅವಕಾಶ ಇಲ್ಲ ಎಂದು ಪುತ್ತೂರು ತಹಶೀಲ್ದಾರ್ ಹಿಂಬರಹ ನೀಡಿದ್ದರು. ಇದನ್ನು ಪ್ರಶ್ನಿಸಿ ಉದಯಕುಮಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ, ಮುಂದಿನ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.