ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜಿರಾಳ ಎಂಬಲ್ಲಿನ ಸರ್ಕಾರಿ ಭೂಮಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮೀಸಲಿಸಿರಿಸಿದ್ದ ಭೂಮಿಗೆ ಅನಧಿಕೃತವಾಗಿ ಅಳವಡಿಸಿದ್ದ ಗೇಟನ್ನು ಪೊಲೀಸ್ ರಕ್ಷಣೆಯೊಂದಿಗೆ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದರು.
ಅಜಿರಾಳ ಎಂಬಲ್ಲಿನ ಸರ್ವೆ ನಂಬ್ರ 104/1ಎ/1ಎ/ಪಿ1ರಲ್ಲಿನ 0.45 ಎಕರೆಯನ್ನು ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಕಾಯ್ದಿರಿಸಿ ಜಿಲ್ಲಾಧಿಕಾರಿ 2016ರ ಏ.22ರಂದು ಆದೇಶಿಸಿದ್ದರು. ಈ ಬಗ್ಗೆ ಸರೋಜಾ ಎಂಬುವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ದಾವೆಯ ವಿಚಾರಣೆ ನಡೆಸಿದ ನ್ಯಾಯಾಲಯವು ಸರೋಜಾ ಸಲ್ಲಿಸಿದ್ದ ದಾವೆಯನ್ನು 2024ರ ಅ.30ರಂದು ವಜಾಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.