
ಪ್ರಜಾವಾಣಿ ವಾರ್ತೆ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದರ್ಪಣ ತೀರ್ಥ ಹೊಳೆ ಪ್ರದೇಶ ಹಾಗೂ ಹೆದ್ದಾರಿ ಕುಸಿತ ಉಂಟಾಗಿದ್ದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅನಾಹುತ ಸಂಭವಿಸದಂತೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಸೂಚನೆ ನೀಡಿದರು.
ಪರ್ವತಮುಖಿ ಸಮೀಪದಲ್ಲಿ ಕುಮಾರಧಾರ ಹೊಳೆ ಬದಿ ಕುಸಿತಗೊಂಡಿರುವ ಪ್ರದೇಶಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು. ಸೇತುವೆ ಸಹಿತ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಈ ಬಗ್ಗೆ ಮಾಹಿತಿ ಜಿಲ್ಲಾಧಿಕಾರಿ, ಈ ಬಾರಿ ಹೆದ್ದಾರಿ ಕುಸಿಯದಂತೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.