ADVERTISEMENT

ಮಂಗಳೂರು: ರಸ್ತೆ ಗುಂಡಿಯಿಂದ ಅಪಘಾತ, ಮೀನು ಸಾಗಣೆ ಲಾರಿಯಡಿ ಸಿಲುಕಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 10:58 IST
Last Updated 9 ಸೆಪ್ಟೆಂಬರ್ 2025, 10:58 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಎ.ಐ ಚಿತ್ರ

ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.

ADVERTISEMENT

ಸ್ಕೂಟರ್ ನಲ್ಲಿ ಸಾಗುತ್ತಿದ್ದ ಮಹಿಳೆಯು ಗುಂಡಿ ತಪ್ಪಿಸುವ ಭರದಲ್ಲಿ ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ವೇಳೆ ಕೂಳೂರು ಕಡೆಯಿಂದ ಸಾಗಿ ಬಂದ ಮೀನಿನ ಲಾರಿ ಅವರ ಮೇಲೆ ಹರಿದಿತ್ತು.

ಉಡುಪಿ ಜಿಲ್ಲೆಯ ಪರ್ಕಳದ ಮಾಧವಿ (38 ) ಮೃತ ಮಹಿಳೆ. ಅವರು ನಗರದ ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿದ್ದರು.

ಕುಂಟಿಕಾನದ ಎ.ಜೆ ಆಸ್ಪತ್ರೆಯ ರಕ್ತ ನಿಧಿಯಲ್ಲಿ ಟೆಕ್ನಿಷಿಯನ್ ಆಗಿದ್ದ ಅವರು ಬೆಳಿಗ್ಗೆ ಚಿತ್ರಾಪುರದಿಂದ ನಗರಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.

ಹೆದ್ದಾರಿ ಗುಂಡಿ ಮುಚ್ಚದ್ದಕ್ಕೆ ಆಕ್ರೋಶ: ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅನೇಕ ಕಡೆ ಭಾರಿ ಗಾತ್ರದ ಗುಂಡಿಗಳು ಉಂಟಾಗಿವೆ. ಆದರೂ ಗುಂಡಿಗಳನ್ನು ದುರಸ್ತಿ ಪಡಿಸಲು ಕ್ರಮವಹಿಸದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.