ADVERTISEMENT

ಹಿಜಾಬ್‌: ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2022, 21:35 IST
Last Updated 18 ಮಾರ್ಚ್ 2022, 21:35 IST

ಉಪ್ಪಿನಂಗಡಿ (ದಕ್ಷಿಣ ಕನ್ನಡ): ಹಿಜಾಬ್ ಧರಿಸಿ ತರಗತಿಯೊಳಗೆ ಕುಳಿತುಕೊಳ್ಳಲು ಅವಕಾಶ ನೀಡದಿರುವುದನ್ನು ಖಂಡಿಸಿ, ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು, ಪರೀಕ್ಷೆ ಬರೆಯದೇ ಮನೆಗೆ ತೆರಳಿದರು.

ಶುಕ್ರವಾರ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಮುಂದಾಗಿದ್ದ ವಿದ್ಯಾರ್ಥಿನಿಯರನ್ನು ಉಪನ್ಯಾಸಕರು ತಡೆದರು. ಇದನ್ನು ವಿರೋಧಿಸಿದ ವಿದ್ಯಾರ್ಥಿನಿಯರು ಪ್ರತಿಭಟನೆ ಆರಂಭಿಸಿದರು. ಇವರಿಗೆ ಬೆಂಬಲವಾಗಿ ಕೆಲ ವಿದ್ಯಾರ್ಥಿಗಳೂ ತರಗತಿ ಬಹಿಷ್ಕರಿಸಿದರು.

ಪರೀಕ್ಷೆಗೆ ಗೈರು: ‘ಜಿಲ್ಲೆಯ 197 ದ್ವಿತೀಯ ಪಿಯುಸಿ ಕಾಲೇಜುಗಳಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆಯುತ್ತಿವೆ. ಹಿಜಾಬ್‌ಗೆ ಅವಕಾಶ ನೀಡದ್ದರಿಂದ ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಬಹುದು’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಡಿ. ಜಯಣ್ಣ ತಿಳಿಸಿದ್ದಾರೆ.

ADVERTISEMENT

‘ಪರೀಕ್ಷೆಯ ಗೈರು ಹಾಜರಿಯನ್ನು ಆಯಾ ಕಾಲೇಜು ಮಟ್ಟದಲ್ಲಿ ದಾಖಲಿಸಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.