ADVERTISEMENT

ಮಂಗಳೂರು | ಹಿಂದೂ ದೇವರ ಅವಹೇಳನ; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 15:49 IST
Last Updated 3 ಆಗಸ್ಟ್ 2023, 15:49 IST
   

ಮಂಗಳೂರು: ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಹಂಚಿಕೊಂಡ ಆರೋಪಿಯನ್ನು ನಗರದ ಸೆನ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

‘ನಗರದ ಬಿಕರ್ನಕಟ್ಟೆಯ ಮಸೀದಿ ಹಿಲ್ ರಸ್ತೆ ಬಳಿಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಬಂಧಿತ. ಆರೋಪಿಯು ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್  ‌ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.