ಮಹೇಶ್ ಶೆಟ್ಟಿ ತಿಮರೋಡಿ
– ಪ್ರಜಾವಾಣಿ ಕಡತ ಚಿತ್ರ
ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಮಾಡಿದ್ದಾರೆ.
ತಿಮರೋಡಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.