ADVERTISEMENT

ಸುಳ್ಯ ಭುಗಿಲೆದ್ದ ಆಕ್ರೋಶ: ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 9:12 IST
Last Updated 27 ಜುಲೈ 2022, 9:12 IST
   

ಸುಳ್ಯ: ಪ್ರವೀಣ್ ಹತ್ಯೆಯಿಂದಾಗಿ ಇಲ್ಲಿ ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಇದನ್ನು ತಡೆಯಲು ಯತ್ನಿಸಿದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.

ಇಲ್ಲಿನ ಸಂಘಪರಿವಾರದ ಸಂಘಟನೆಗಳ ಪ್ರಮುಖರು ಅಂಗಡಿಗಳ ಮುಂಗಟ್ಟು ಬಂದ್ ಮಾಡಲು ಕರೆ ನೀಡುತ್ತಿದ್ದಾರೆ. ಸುಮಾರು 50ಕ್ಕೂ ಕಾರ್ಯಕರ್ತರು ಸುಳ್ಯ ಮುಖ್ಯ ರಸ್ತೆಯಲ್ಲಿ ಚಲಿಸುತ್ತಾ ಅಂಗಡಿ ಬಂದ್ ಮಾಡಲು ಸೂಚನೆ ನೀಡಿದರು. ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಮುಚ್ಚಿವೆ. ರಥ ಬೀದಿಯಿಂದ ಗಾಂಧಿನಗರದ ಕೆಲವು ಅಂಗಡಿಗಳು ಕಾರ್ಯಚರಿಸುತ್ತಿದೆ.

ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಆಟೋ ಚಾಲಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.

ADVERTISEMENT

ಔಷಧ ಅಂಗಡಿಗಳು, ಹಾಲಿನ ಅಂಗಡಿಗಳು ಎಂದಿನಂತೆ ಕಾರ್ಯಚರಿಸುತ್ತಿದೆ.

ಶಾಲೆ ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಿದ್ದರಿಂದ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾರೆ. ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.