
ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕೇಂದ್ರವನ್ನು ಶನಿವಾರ ಉದ್ಘಾಟನೆ ಮಾಡಲಾಯಿತು.
ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಉದ್ಘಾಟಿಸಿ ಮಾತನಾಡಿ, ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಅಂಗನವಾಡಿ ಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಹಿರಿಯ ದಂತ ವೈದ್ಯ ರಾಜಾರಾಮ್ ಮಾತನಾಡಿ, ಮಕ್ಕಳಿಗೆ ಮನೆಯ ವಾತಾವರಣದಲ್ಲಿ ಪೌಷ್ಟಿಕ ಆಹಾರದೊಂದಿಗೆ ಸಂಸ್ಕಾರಯುತ ಶಿಕ್ಷಣವನ್ನು ಒದಗಿಸಲು ಅಂಗನವಾಡಿ ಕೇಂದ್ರಗಳು ಸಹಕಾರಿಯಾಗಿದೆ ಎಂದರು.
ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಸತೀಶ್ ಶೆಟ್ಟಿ ಹೆನ್ನಾಳ, ಗೀತಾ ದಾಸರಮೂಲೆ, ಲಕ್ಷ್ಮೀಶ, ಸವಿತಾ ಹರೀಶ್, ಭವಾನಿ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಅನಿತಾ, ಅಂಗನವಾಡಿಗಳ ಮೇಲ್ವಿಚಾರಕಿ ನಂದನ, ಪ್ರಮುಖರಾದ ವೆಂಕಪ್ಪ ಪೂಜಾರಿ, ನಿತ್ಯಾನಂದ ಶೆಟ್ಟಿ, ಪಂಚಾಯಿತಿ ಕಾರ್ಯದರ್ಶಿ ಸತೀಶ್ ಬಂಗೇರ, ಅಂಗನವಾಡಿ ಕಾರ್ಯಕರ್ತೆ ಪವಿತ್ರಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.