ADVERTISEMENT

ಕುಕ್ಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 4:22 IST
Last Updated 9 ನವೆಂಬರ್ 2021, 4:22 IST
ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರ ಅವರನ್ನು ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವದಿಸಿದರು.
ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರ ಅವರನ್ನು ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವದಿಸಿದರು.   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಭೇಟಿ ನೀಡಿ, ದೇವರ ದರ್ಶನ ಪಡೆದರು.

ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ದೇವಳದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಂಡರು. ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಶ್ರೀವತ್ಸ, ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್. ಪ್ರಸಾದ್, ಶೋಭಾ ಗಿರಿಧರ್, ವನಜಾ ವಿ.ಭಟ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್, ಪ್ರಮುಖರಾದ ಶ್ರೀಕುಮಾರ್ ಬಿಲದ್ವಾರ, ದಿನೇಶ್ ಸಂಪ್ಯಾಡಿ, ವೆಂಕಟ್ ವಲಲಂಬೆ, ಪ್ರಸಾದ್ ಕೆ.ರೈ ಇದ್ದರು.

ಶ್ರೀಗಳ ಆಶೀರ್ವಾದ: ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರ, ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದೆಸಿ, ಪ್ರಸಾದ ನೀಡಿ ಶುಭ ಹಾರೈಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.