ಮಂಗಳೂರು: ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ (ಎಸ್‌ಸಿಡಿಸಿಸಿ) ಶುಕ್ರವಾರ ಭೇಟಿ ನೀಡಿ, ಬ್ಯಾಂಕ್‌ನ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಚಿವರಿಬ್ಬರನ್ನು ಸನ್ಮಾನಿಸಿದ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಅವರು, ಬ್ಯಾಂಕ್‌ನ ಕಾರ್ಯ ಚಟುವಟಿಕೆ ಬಗ್ಗೆ ತಿಳಿಸಿದರು. ಸಚಿವರ ಜೊತೆಗಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಮೇಘರಾಜ್ ಜೈನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.