ADVERTISEMENT

ಕಕ್ಕಿಂಜೆ ಶಾಲೆ: ಶಾಲೆ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2025, 12:38 IST
Last Updated 18 ಫೆಬ್ರುವರಿ 2025, 12:38 IST
<div class="paragraphs"><p>ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು</p></div>

ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

   

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕಕ್ಕಿಂಜೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಅಸ್ವಸ್ಥರಾದ ಮಕ್ಕಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಮಂಗಳವಾರ ಬೆಳಿಗ್ಗೆ ಮಕ್ಕಳು ಶಾಲೆಯಲ್ಲಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ್ದು, ಮಕ್ಕಳ ಅಳು ಕೇಳಿ ಸಾರ್ವಜನಿಕರು ಶಾಲೆಗೆ ಬಂದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಶಾಲೆಯ ಸುತ್ತಲೂ ಹೆಜ್ಜೇನು ಹಿಂಡು ಹಾರಾಡುತ್ತಿದ್ದು, ಸ್ಥಳೀಯರು ಹೊಗೆ ಹಾಕಿ ಹೆಜ್ಜೇನುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳೂ ಶಾಲೆಗೆ ಭೇಟಿ ನೀಡಿದ್ದಾರೆ. ಶಾಲೆಗೆ ಮಂಗಳವಾರ ರಜೆ ಘೋಷಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.