ವಿಟ್ಲ (ದಕ್ಷಿಣ ಕನ್ನಡ): ವಿಟ್ಲ ಸಮೀಪದ ಕನ್ಯಾನದಲ್ಲಿ ತನ್ನ ಪತ್ನಿಯ ಸೀಮಂತ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಕುಸಿದು ಬಿದ್ದು ಶುಕ್ರವಾರ ಮೃತಪಟ್ಟಿದ್ದಾರೆ.
ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಮೃತ ವ್ಯಕ್ತಿ. ಅವರ ಪತ್ನಿಯ ಸೀಮಂತ ಶುಕ್ರವಾರ ನಿಗದಿಯಾಗಿತ್ತು.
ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಷ್ಡರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿಗೆ ವೈದ್ಯಕೀಯ ಕಾರಣ ತಿಳಿದು ಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.