ADVERTISEMENT

ಸುಳ್ಯ: ಗುಂಡಿಕ್ಕಿ ಪತ್ನಿ ಕೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2025, 4:54 IST
Last Updated 18 ಜನವರಿ 2025, 4:54 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಸುಳ್ಯ (ದಕ್ಷಿಣ ಕನ್ನಡ): ಮರ್ಕಂಜ ಸಮೀಪದ ನೆಲ್ಲೂರು‌‌ ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೆಲ್ಲೂರು‌‌ ಕೆಮ್ರಾಜೆ ಗ್ರಾಮದ ಕೋಡಿಮಜಲಿನ ರಾಮಚಂದ್ರ ಗೌಡ (54), ಅವರ ಪತ್ನಿ ವಿನೋದ (43) ಮೃತರು. ಕೌಟುಂಬಿಕ ಕಲಹವೇ ಇದಕ್ಕೆ ಕಾರಣ ಎಂದು ‌ಪೊಲೀಸರು ಹೇಳಿದ್ದಾರೆ.

ADVERTISEMENT

‘ಶುಕ್ರವಾರ ರಾತ್ರಿ ಮದ್ಯ ಸೇವಿಸಿ ಬಂದು 10 ಗಂಟೆಯ ನಂತರ ಪತ್ನಿ ವಿನೋದ ಹಾಗೂ ಪುತ್ರ ಪ್ರಶಾಂತ್‌ ಜತೆ ರಾಮಚಂದ್ರ ಗೌಡ ಜಗಳ ಆರಂಭಿಸಿದ್ದ. ಈ ರೀತಿ ಜಗಳವಾಡುವುದನ್ನು ಹಿರಿಯ ಮಗ ಪ್ರಶಾಂತ್ ವಿರೋಧಿಸಿದ್ದ. ಆಗ ರಾಮಚಂದ್ರ ಗೌಡ ಮನೆಯಲ್ಲಿದ್ದ ಕೋವಿ ಎತ್ತಿಕೊಂಡು, ಮಗನಿಗೆ ಗುಂಡಿಕ್ಕಲು ಮುಂದಾದ. ಇದನ್ನು ಕಂಡ ಪತ್ನಿ ವಿನೋದ ಅಡ್ಡ ಬಂದು ಗಂಡನನ್ನು ತಡೆಯಲು ಪ್ರಯತ್ನಿಸಿದಾಗ ರಾಮಚಂದ್ರ ಗೌಡ ಹಾರಿಸಿದ ಗುಂಡು ವಿನೋದ‌ ಅವರಿಗೆ ತಾಗಿ ಮೃತಪಟ್ಟಿದ್ದಾರೆ. ಬಳಿಕ ರಾಮಚಂದ್ರ ಗೌಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.