ಸಾಂದರ್ಭಿಕ ಚಿತ್ರ
ಮಂಗಳೂರು: ಬೆಳ್ತಂಗಡಿ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ಗಂಡ - ಹೆಂಡತಿ ನಡುವಿನ ಜಗಳವು ಹೆಂಡತಿಯ ಕೊಲೆಯಲ್ಲಿ ಅಂತ್ಯಗೊಂಡಿದೆ.
ಝೀನತ್ (40) ಕೊಲೆಯಾದವರು.
ಝೀನತ್ ಮತ್ತು ರಫೀಕ್ 18 ವರ್ಷಗಳ ಹಿಂದೆ ಮದುವೆಯಾದವರು. ಅವರಿಗೆ ಇಬ್ಬರು ಮಕ್ಕಳು ಇದ್ದಾರೆ. ಇತ್ತೀಚಿನ ಕೆಲವು ತಿಂಗಳುಗಳಿಂದ ದಂಪತಿ ನಡುವೆ ವೈಮನಸ್ಯ ಮೂಡಿ ಆಗಾಗ ಕಲಹ ನಡೆಯುತ್ತಿತ್ತು. ಗುರುವಾರ ಬೆಳಿಗ್ಗೆ ದಂಪತಿ ಜಗಳವಾಡಿಕೊಂಡಿದ್ದು, ಈ ವೇಳೆ ರಫೀಕ್, ಪತ್ನಿಯ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.
ಸ್ಥಳೀಯರು ಹಾಗೂ ಸಂಬಂಧಿಕರು ತಕ್ಷಣ ಝೀನತ್ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.