
ಐಪಿಎಸ್
ಪುತ್ತೂರು: ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್- ಐಪಿಎಸ್ ಅಧಿಕಾರಿಗಳಾಗಬೇಕು ಎಂಬ ಆಶಯದೊಂದಿಗೆ ‘ಕನ್ನಡದಲ್ಲೂ ಐಎಎಸ್ ಬರೆಯಿರಿ’ ಎಂಬ ಘೋಷ ವಾಕ್ಯದಡಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕದ ನೇತೃತ್ವದಲ್ಲಿ, ಸಂಪ್ಯದ ಅಕ್ಷಯ ಕಾಲೇಜಿನ ಆಶ್ರಯದಲ್ಲಿ ಫೆ.18ರಂದು ಬೆಳಿಗ್ಗೆ 9ರಿಂದ ಐಎಎಸ್- ಐಪಿಎಸ್ ಹಾಗೂ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ನಡೆಯಲಿದೆ.
ಪುತ್ತೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೋಟರಿ ಕ್ಲಬ್ ಪುತ್ತೂರು ಯುವ, ಅಕ್ಷಯ ರೋಟರಾಕ್ಟ್ ಕ್ಲಬ್ ಹಾಗೂ ಐಕ್ಯುಎಸಿ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಉದ್ಘಾಟಿಸುವರು, ಐಎಎಸ್ ದರ್ಶನ ಸಂಸ್ಥೆಯ ಮುಖ್ಯಸ್ಥ ದರ್ಶನ್ ಗರ್ತಿಕೆರೆ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರ ನಡೆಸಿಕೊಡುವರು. ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಸಕ್ತಿ ಹೊಂದಿರುವ ಸಾರ್ವಜನಿಕರು, ಪೋಷಕರು ಹಾಗೂ ಅಧ್ಯಾಪಕರು ಭಾಗವಹಿಸಬಹುದು. ಭಾಗವಹಿಸಲು ಇಚ್ಛಿಸುವವರು ಫೆ.17ರ ಸಂಜೆ 4 ಗಂಟೆಯೊಳಗೆ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕದ ಉಮೇಶ್ ನಾಯಕ್ ಅವರ ಮೊ: 9844401295ಗೆ ವಾಟ್ಸ್‌ಆ್ಯಪ್ ಮೂಲಕ ಹೆಸರು ನೋಂದಾಯಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.