ಮೂಡುಬಿದಿರೆ: ಸಂವಿಧಾನದ ಮೂಲ ತತ್ವ ಹಾಗೂ ಹಕ್ಕುಗಳನ್ನು ಗೌರವಿಸುವುದರೊಂದಿಗೆ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿರಬೇಕು ಎಂದು ಬೆಂಗಳೂರು ಡಿಜೆಸಿಎನ್‌ನ ನಿರ್ದೇಶಕ ಜಗದೀಶ್ ಬಲ್ಲಾಳ್ ಹೇಳಿದರು.
ಇಲ್ಲಿನ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಸಂವಿಧಾನದ ಮೌಲ್ಯಗಳನ್ನು ಗೌರವಿಸುವುದರೊಂದಿಗೆ ರಾಷ್ಟ್ರಭಕ್ತರಾಗೋಣ ಎಂದರು.
ಸಂಸ್ಥೆಯ ಎನ್‌ಸಿಸಿ ಕೆಡೆಟ್‌ಗಳಿಂದ ಪಥ ಸಂಚಲನ ನಡೆಯಿತು.
ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್ ಭಾಗವಹಿಸಿದ್ದರು. ಉಪನ್ಯಾಸಕಿ ಪ್ರಿಯಾಂಕ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.