ADVERTISEMENT

ಮಂಗಳೂರು: ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 5:57 IST
Last Updated 24 ನವೆಂಬರ್ 2021, 5:57 IST
ಮಂಗಳೂರಿನ ಅಶೋಕ ನಗರದಲ್ಲಿರುವ ಲಿಂಗೇಗೌಡರ ಮನೆ
ಮಂಗಳೂರಿನ ಅಶೋಕ ನಗರದಲ್ಲಿರುವ ಲಿಂಗೇಗೌಡರ ಮನೆ    

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ ಕಾರ್ಯ‌ನಿರ್ವಾಹಕ ಎಂಜಿನಿಯರ್ ಲಿಂಗೇಗೌಡ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಲ್ಲಿನ ಅಶೋಕ ನಗರದಲ್ಲಿರುವ ಅವರ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಲಿಂಗೇಗೌಡರು ಮೂರು ದಶಕಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಅವಧಿಯಲ್ಲಿ ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವಿಭಾಗದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರನ್ನು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ವರ್ಗಾಯಿಸಲಾಗಿತ್ತು.

ADVERTISEMENT

15 ವರ್ಷಗಳ ಹಿಂದೆ ಅವರ ಮೇಲೆ ಲೋಕಾಯುಕ್ತ ತನಿಖೆ ನಡೆದಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.