ADVERTISEMENT

ಅನಧಿಕೃತ ಬ್ಯಾನರ್: ಪಾಲಿಕೆಯಿಂದ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 5:58 IST
Last Updated 18 ಜನವರಿ 2024, 5:58 IST

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬ್ಯಾನರ್, ಕಟೌಟ್, ಬಂಟಿಂಗ್ಸ್, ಫ್ಲೆಕ್ಸ್‌ಗಳನ್ನು ಅಳವಡಿಸಿ, ಅದರಿಂದ ಅವಘಡ ಸಂಭವಿಸಿದಲ್ಲಿ ಪ್ರಕಟಣೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ರಸ್ತೆ ಬದಿಗಳಲ್ಲಿ ಕೆಲವು ಜಾಹೀರಾತು ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಅನಧಿಕೃತ ಬ್ಯಾನರ್, ಬಂಟಿಂಗ್ಸ್ ಇತ್ಯಾದಿ ಅಳವಡಿಸುವುದು ಕಂಡುಬರುತ್ತಿದೆ. ಇದರಿಂದ ಪಾದಚಾರಿಗಳು, ವಾಹನ ಸವಾರರಿಗೆ ತೊಂದರೆಯಾಗುತ್ತದೆ.

ಅಪಘಾತದ ಸಾಧ್ಯತೆಗಳು, ವಿದ್ಯುತ್ ಅವಘಡಗಳ ಸಾಧ್ಯತೆ ಇರುತ್ತದೆ. ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಬಗ್ಗೆ ಪೊಲೀಸ್ ಇಲಾಖೆಯಿಂದ ಆಕ್ಷೇಪ ವ್ಯಕ್ತವಾಗಿದೆ.  ಪಾಲಿಕೆ ಆಧೀನದಲ್ಲಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿ ಒಟ್ಟು 1,084 ಅಧಿಕೃತ ಜಾಹೀರಾತು ಫಲಕಗಳಿದ್ದು, ಇವುಗಳನ್ನು ಬಳಕೆ ಮಾಡಿ ಜಾಹೀರಾತುಗಳನ್ನು ಪ್ರಕಟಿಸಬೇಕು. ಅನಧಿಕೃತ ಫಲಕಗಳ ಮೂಲಕ ಅವಘಡಗಳಾಗಿ ಪ್ರಾಣಹಾನಿ ಸಂಭವಿಸಿದಲ್ಲಿ ಸಂಬಂಧಪಟ್ಟ ಸಂಸ್ಥೆ ಅಥವಾ ವ್ಯಕ್ತಿ ಅಥವಾ ಪ್ರಕಟಣೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ಅವರು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.