ADVERTISEMENT

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ: ಕಸ್ಟಮ್ಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 19:20 IST
Last Updated 11 ಆಗಸ್ಟ್ 2022, 19:20 IST
   

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮತ್ತೆರಡು ಅಕ್ರಮ ಚಿನ್ನ ಸಾಗಣೆ ಪ್ರಕರಣಗಳು ನಡೆದಿವೆ.

ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನು ಸಾಗಣೆ ಮಾಡಲು ಯತ್ನಿಸಿದ್ದರು. ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ ₹ 43.29 ಲಕ್ಷ ಎಂದು ಅಂದಾಜಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ, ಆತನ ಬಳಿ ₹ 5.97 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಈತ ಬ್ಯಾಗ್‌ನಲ್ಲಿ ಕರೆನ್ಸಿಯನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಬುಧವಾರ ಕಾಸರಗೋಡು ಮೂಲದ ಪ್ರಯಾಣಿಕನಿಂದ ₹ 17.43 ಲಕ್ಷ ಮೌಲ್ಯದ ಚಿನ್ನದ ಗಟ್ಟಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.