ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ₹5.50 ಲಕ್ಷ ಮೌಲ್ಯದ ಅಕೇಶಿಯಾ, ಮ್ಯಾಂಜಿಯಂ ದಿಮ್ಮಿಗಳನ್ನು ಮಂಗಳೂರಿನ ಅರಣ್ಯ ಸಂಚಾರಿ ದಳ ವಾಹನಸಮೇತ ವಶಪಡಿಸಿಕೊಂಡಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಮಾರ್ಗದರ್ಶನದಲ್ಲಿ ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ, ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್ ಡಿಸೋಜ, ವಾಹನ ಚಾಲಕ ಜಯಪ್ರಕಾಶ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.