ADVERTISEMENT

ಅಕ್ರಮ ಸಾಗಾಟ: 34 ಗೋವುಗಳ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 7:19 IST
Last Updated 23 ಫೆಬ್ರುವರಿ 2026, 7:19 IST
ಪೊಲೀಸರು ರಕ್ಷಿಸಿರುವ ಗೋವುಗಳು
ಪೊಲೀಸರು ರಕ್ಷಿಸಿರುವ ಗೋವುಗಳು   

ಮಂಗಳೂರು: ಲಾರಿಯೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ, ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಕದ್ರಿ ಠಾಣೆ ಪೊಲೀಸರು 34 ಗೋವುಗಳನ್ನು ರಕ್ಷಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಭಾನುವಾರ ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಶಿವಮೊಗ್ಗದಿಂದ ಮಂಗಳೂರು ಮೂಲಕ ಕೇರಳದ ಹೊಸಂಗಡಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಡೆದು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.

ಲಾರಿಯಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ದಸ್ತಗೀರ್ ಸಾಬ್‌, ಖತೀಬ್ ಪಾಷಾ, ಅಯೂಬ್ ಖಾನ್ ಆರೋಪಿಗಳು ಎಂದು ಗುರುತಿಸಲಾಗಿದೆ. ‌ಗೋವುಗಳನ್ನು ಹೊಸಂಗಡಿಯಲ್ಲಿ ಮಾಂಸ ಮಾಡಿ ಪೂರೈಕೆ ಮಾಡಲು ಯೋಜನೆ ರೂಪಿಸಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ. ಆರೋಪಿಗಳ ವಿರುದ್ಧ ಕರ್ನಾಟಕ ಗೋ ಹತ್ಯೆ ತಡೆ– ಗೋವು ಸಂರಕ್ಷಣಾ ಕಾಯ್ದೆ, ಕಲಂ 11ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.