ADVERTISEMENT

ಮಕ್ಕಳಿಗೆ ಕಾನೂನಿನ ತಿಳಿವಳಿಕೆ ಅಗತ್ಯ: ಸಿವಿಲ್‌ ನ್ಯಾಯಾಧೀಶೆ ಶೋಭಾ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2023, 14:04 IST
Last Updated 17 ನವೆಂಬರ್ 2023, 14:04 IST
<div class="paragraphs"><p>ಮಕ್ಕಳ ಹಕ್ಕುಗಳ ಮಾಸೋತ್ಸವಕ್ಕೆ&nbsp; ಹಿರಿಯ ಸಿವಿಲ್‌ ನ್ಯಾಯಧೀಶೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಅವರು ಶುಕ್ರವಾರ ಚಾಲನೆ ನೀಡಿದರು</p></div>

ಮಕ್ಕಳ ಹಕ್ಕುಗಳ ಮಾಸೋತ್ಸವಕ್ಕೆ  ಹಿರಿಯ ಸಿವಿಲ್‌ ನ್ಯಾಯಧೀಶೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಅವರು ಶುಕ್ರವಾರ ಚಾಲನೆ ನೀಡಿದರು

   

ಮಂಗಳೂರು: ‘ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಹಾಗೂ ಅವರ ಹಕ್ಕುಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಅಗತ್ಯ. ಜೊತೆಗೆ, ಮಕ್ಕಳು ತಮ್ಮ ಕರ್ತವ್ಯಗಳ ಬಗ್ಗೆಯೂ ತಿಳಿವಳಿಕೆ ಹೊಂದಿರಬೇಕು’ ಎಂದು ಹಿರಿಯ ಸಿವಿಲ್‌ ನ್ಯಾಯಧೀಶೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಹೇಳಿದರು.

ಮಕ್ಕಳ ಹಕ್ಕುಗಳ ಮಾಸೋತ್ಸವ ಸಂಚಾಲನಾ ಸಮಿತಿಯು ಹಮ್ಮಿಕೊಂಡಿರುವ ‘ಮಕ್ಕಳ ಹಕ್ಕುಗಳ ಮಾಸೋತ್ಸವ’ವನ್ನು ಉದ್ಘಾಟಿಸಿ ಶುಕ್ರವಾರ ಅವರು ಮಾತನಾಡಿದರು.

ADVERTISEMENT

ಪಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆನ್ನಿ ಡಿಸೋಜ ಪ್ರಾಸ್ತಾವಿಕ ಮಾತನಾಡಿ, ‘ಎಲ್ಲಾ ವರ್ಗದ ಮಕ್ಕಳಿಗೂ ತಮ್ಮ ಹಕ್ಕುಗಳು ಸಿಗುವಂತಾಗಬೇಕು. ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣದಲ್ಲಿ ವಿವಿಧ ಇಲಾಖೆ, ಸಂಘ ಸಂಸ್ಥೆ ಮತ್ತು ಸಮುದಾಯದ ಸಹಭಾಗಿತ್ವ ಬಹುಮುಖ್ಯ’ ಎಂದರು.

ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್‌ ಆಯುಕ್ತ ಬಿ.ಪಿ. ದಿನೇಶ್‌ ಕುಮಾರ್  ಮಾತನಾಡಿ, ‘ಮಕ್ಕಳು ಪ್ರಶ್ನೆ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು, ಆಗ ಮಾತ್ರ ಸಮಾಜವನ್ನು ಸದೃಢವಾಗಿರಿಸಲು ಸಾಧ್ಯ’ ಎಂದರು.

ದ.ಕ. ಜಿಲ್ಲಾ ಮಕ್ಕಳ ಹಕ್ಕುಗಳ ಮಾಸೋತ್ಸವ ಸಂಚಾಲಕಿ ನಂದಾ ಪಾಯಸ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಂಘಟನೆಗಳ ಪ್ರತಿನಿಧಿಗಳಾದ ಆಶಾ ನಾಗರಾಜ್‌, ನೇತ್ರಾವತಿ ಮಂಗಳೂರು, ನಯನಾ ರೈ, ಪ್ರವೀಣ್‌ ಆಚಾರ್ಯ, ಕಸ್ತೂರಿ ಬೋಳುವಾರು, ರಶ್ಮಿ, ಸಿಸ್ಟರ್‌ ಲೀನಾ ಬೆಥನಿ ಇದ್ದರು.

ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು, ಉಷಾ ನಾಯ್ಕ್‌ ಸ್ವಾಗತಿಸಿದರು. ಆಶಾ ಸುವರ್ಣ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.