ADVERTISEMENT

ಮಂಗಳೂರಿನಲ್ಲಿ ಎನ್‌ಐಎ ಕಚೇರಿ; ಸುಳಿವು ನೀಡಿದ ಬೊಮ್ಮಾಯಿ

ಸುಳಿವು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 12:48 IST
Last Updated 13 ಆಗಸ್ಟ್ 2021, 12:48 IST
 ರಾಷ್ಟ್ರೀಯ ತನಿಖಾದಳ(ಎನ್‍ಐಎ)-ಪ್ರಾತಿನಿಧಿಕ ಚಿತ್ರ
ರಾಷ್ಟ್ರೀಯ ತನಿಖಾದಳ(ಎನ್‍ಐಎ)-ಪ್ರಾತಿನಿಧಿಕ ಚಿತ್ರ   

ಮಂಗಳೂರು: ರಾಷ್ಟ್ರೀಯ ತನಿಖಾದಳ(ಎನ್‍ಐಎ)ದ ಕಚೇರಿಯನ್ನು ಮಂಗಳೂರಿನಲ್ಲಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎರಡು ದಿನಗಳ ಭೇಟಿ ಪೂರ್ಣಗೊಳಿಸಿ, ಶುಕ್ರವಾರ ಬೆಂಗಳೂರಿಗೆ ತೆರಳುವ ಮುನ್ನ ಇಲ್ಲಿನ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಗೃಹ ಸಚಿವರು ಸದ್ಯದಲ್ಲಿ ಮಂಗಳೂರಿಗೆ ಭೇಟಿ ನೀಡಿ, ಎನ್ಐಎ ಕಚೇರಿ ಸ್ಥಾಪನೆ ಸಂಬಂಧ ಪರಿಶೀಲಿಸುವರು. ಈಗಾಗಲೇ ಎರಡು ಸಭೆಗಳನ್ನು ನಡೆಸಿ, ವರದಿ ಪಡೆದಿದ್ದಾರೆ. ಅವರ ಮಂಗಳೂರು ಭೇಟಿ ಬಳಿಕ, ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರ ಈಗಾಗಲೇ ಕೆಲವು ಹೆಜ್ಜೆಗಳನ್ನು ಇಟ್ಟಿದ್ದು, ಎಲ್ಲವನ್ನೂ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಬರುವ ದಿನಗಳಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ADVERTISEMENT

ಗಡಿ ಭದ್ರತೆ ಪರಿಶೀಲಿಸಲು ತಲಪಾಡಿಗೆ ಭೇಟಿ ನೀಡಬೇಕಾಗಿದ್ದ ಮುಖ್ಯಮಂತ್ರಿ ಕಾರ್ಯಕ್ರಮವನ್ನು ರದ್ದುಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.