ಪುತ್ತೂರು: ನಗರದ ಕೆದಿಲ ಗ್ರಾಮದ ಸತ್ತಿಕಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ಆ ಪೈಕಿ ಒಬ್ಬ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಾದಕ ವಸ್ತು ಸೇವನೆ ಮಾಡಿ ಅನುಚಿತವಾಗಿದ ವರ್ತಿಸಿದ ಆರೋಪ ಮೇಲೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮಹಮ್ಮದ್ ಕಲಂದರ್ ಶಾಫಿ (24) ವಿರುದ್ಧ ಪ್ರಕರಣ ದಾಖಲಾಗಿದೆ.
ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವ ಮಾಹಿತಿಯ ಮೇಲೆ ಪುತ್ತೂರು ನಗರ ಠಾಣೆಯ ಎಸ್ಐ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿ ಅಲ್ಲಿಗೆ ತೆರಳಿ ವಿಚಾರಣೆ ನಡೆಸಿ ಅವರಿಬ್ಬರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಹಮ್ಮದ್ ಕಲಂದರ್ ಶಾಫಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.