ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿಯನ್ನು ಹೊಂದಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3.6 ವರ್ಷ ಸಾದಾ ಸಜೆ ಹಾಗೂ ₹ 50 ಲಕ್ಷ ದಂಡ ವಿಧಿಸಿ ಆದೇಶಿಸಿದೆ.
ಬಿಜೈಯ ರತ್ನಾಕರ ನಾಯ್ಕ್ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿಯ ಆಧಾರದಲ್ಲಿ ಮಂಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 2012ರ ಜು.30ರಂದು ಪ್ರಕರಣ ದಾಖಲಾಗಿತ್ತು. ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಆದೇಶ ಪ್ರಕಟಿಸಿದ್ದಾರೆ. ದಂಡ ಕಟ್ಟಲು ವಿಫಲರಾದಲ್ಲಿ ಮತ್ತೆ 6 ತಿಂಗಳ ಕಾಲ ಸಾದಾ ಸಜೆಗೆ ಆದೇಶಿಸಲಾಗಿದೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ವಿಠಲದಾಸ್ ಪೈ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.