ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿವರೆಗಿನ ಹೆದ್ದಾರಿ ಕಾಮಗಾರಿ ಅಪೂರ್ಣಗೊಂಡಿದ್ದು, ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಬಳಿ ಚಂದ್ರಶೇಖರ ಎಂಬುವರ ಮನೆಗೆ ಮಳೆ ನೀರು ಪ್ರವಾಹದಂತೆ ನುಗ್ಗಿದೆ. ಇಲ್ಲಿ ಮೋರಿ ಮತ್ತು ಚರಂಡಿ ಕಾಮಗಾರಿ ಸ್ಥಗಿತಗೊಂಡಿದ್ದು, ಚರಂಡಿಯಲ್ಲಿ ಹರಿಯಬೇಕಿದ್ದ ನೀರು, ಮನೆಯೊಳಗೆ ಬರುವಂತಾಗಿದೆ. ಹೆದ್ದಾರಿ ಕಾಮಗಾರಿಯ ಅವಾಂತರದಿಂದಾಗಿ ಪತ್ನಿ ಮಕ್ಕಳ ಜತೆಗೆ ಚಂದ್ರಶೇಖರ ಅವರು ಕಾಳಜಿ ಕೇಂದ್ರ ಸೇರಬೇಕಾದ ಸ್ಥಿತಿ ಬಂದೊದಗಿದೆ. ಅವರ ಮನೆಯೂ ಅಪಾಯದಲ್ಲಿದೆ.
ಹೆದ್ದಾರಿ ಪ್ರಾಧಿಕಾರ, ಸಂಬಂಧಿಸಿದ ಗುತ್ತಿಗೆದಾರ, ಜಿಲ್ಲಾಡಳಿತ ತುತ್ತು ಕ್ರಮ ವಹಿಸಿ ತಮ್ಮ ಕುಟುಂಬಕ್ಕೆ ಮತ್ತು ಮನೆಗೆ ಸೂಕ್ತ ರಕ್ಷಣೆ, ಪರಿಹಾರ ಒದಿಸಬೇಕು ಎಂದು ಚಂದ್ರಶೇಖರ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.