ADVERTISEMENT

ಧರ್ಮಸ್ಥಳ: ಸೌಜನ್ಯಾ ಮನೆಗೆ ವಿಜಯೇಂದ್ರ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 5:05 IST
Last Updated 2 ಸೆಪ್ಟೆಂಬರ್ 2025, 5:05 IST
Shwetha Kumari
   Shwetha Kumari

ಧರ್ಮಸ್ಥಳ (ದಕ್ಷಿಣ ಕನ್ನಡ): ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ, ಪಾಂಗಾಳದಲ್ಲಿರುವ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಾವೇಶದ ನಂತರ ಭೇಟಿ ನೀಡಿದರು. ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರೊಂದಿಗೆ ಚರ್ಚಿಸಿದರು.

‘ಸೌಜನ್ಯಾ ಪ್ರಕರಣದ ಬಗ್ಗೆ ಸಿಬಿಐ ಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ. ಅದರ ವೆಚ್ಚವನ್ನು ಬಿಜೆಪಿ ಭರಿಸಲಿದೆ. ವೆಚ್ಚದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಕುಸುಮಾವತಿ ಅವರಿಗೆ ಹೇಳಿದ್ದೇವೆ’ ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.

ಇದಕ್ಕೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ್ದ ಅವರು, ‘ಸೌಜನ್ಯಾ ಹತ್ಯೆ ಪ್ರಕರಣ ಮರು ತನಿಖೆಗೆ ಸರ್ಕಾರ ಕ್ರಮ ವಹಿಸಿ ಆ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಿ. ಈ ವಿಚಾರದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ಕೊಡುತ್ತದೆ’ ಎಂದು ಹೇಳಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.